ಮೈಸೂರು :
ಉಪ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ ಎಂಬ ಮಾತುಗಳಿಗೆ ಪೂರಕವೆನ್ನುವಂತೆ ಭಾರಿ ಮೊತ್ತದ ಹಣ ಜಪ್ತಿ ಮಾಡಲಾಗಿದೆ.
ಹುಣಸೂರು ಉಪಚುನಾವಣಾ ಅಖಾಡ ರಂಗೇರಿದ್ದು, ಅಭ್ಯರ್ಥಿಗಳ ಗೆಲುವು ರಾಜಕೀಯ ಪಕ್ಷಗಳಿಗೆ ಪ್ರತಿಷ್ಟೆಯಾಗಿ ಪರಿಣಮಿಸಿದೆ. ಹುಣಸೂರು ಮನುಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಾಹನ ಒಂದರಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಕೋಟಿ ರೂಪಾಯಿ ಜಪ್ತಿ ಮಾಡಲಾಗಿದೆ.
ಮೂರು ಚೀಲಗಳಲ್ಲಿ ಎರಡು ಕೋಟಿ ರೂಪಾಯಿ ಸಾಗಿಸುತ್ತಿದ್ದು, ಎಂಡಿಸಿಸಿ ಬ್ಯಾಂಕ್ ನ ಇಬ್ಬರು ನೌಕರರು ಹಣವಿದ್ದ ವಾಹನದಲ್ಲಿದ್ದರು. ಪಿರಿಯಾಪಟ್ಟಣ ಬ್ಯಾಂಕ್ ಗೆ ಹಣ ತೆಗೆದುಕೊಂಡು ಹೋಗುತ್ತಿರುವುದಾಗಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಅನುಮತಿ ಪಡೆಯದೆ ಮತ್ತು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣ ಜಪ್ತಿ ಮಾಡಲಾಗಿದ್ದು, ವಾಹನದಲ್ಲಿದ್ದ ನೌಕರರನ್ನು ವಿಚಾರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಝಣಝಣ ಕಾಂಚಾಣದ ಸದ್ದು ಜೋರಾಗಿಯೇ ಕೇಳಿಬರುತ್ತಿದ್ದು, ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.