ಸಚಿವ ಸಂಪುಟ ವಿಸ್ತರಣೆ : ಇಲ್ಲಿದೆ ನೂತನ ಸಚಿವರ ಪಟ್ಟಿ..!!

ಬೆಂಗಳೂರು:

      ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಡೆಗೂ ಕಾಲ ಕೂಡಿ ಬಂದಿದ್ದು, ಇಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಎಂಟು ಮಂದಿ ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

      ಸಚಿವರುಗಳಾದ ರಮೇಶ್ ಜಾರಕಿಹೊಳಿ ಹಾಗೂ ಆರ್. ಶಂಕರ್ ಅವರನ್ನು ಸಂಪುಟದಿಂದ ಕೈ ಬಿಡಲಾಗುತ್ತಿದ್ದು, ನೂತನ ಸಚಿವರುಗಳಾಗಿ ಸತೀಶ್ ಜಾರಕಿಹೊಳಿ, ಸಿ.ಎಸ್. ಶಿವಳ್ಳಿ, ಎಂಟಿಬಿ ನಾಗರಾಜ್, ಪಿ.ಟಿ. ಪರಮೇಶ್ವರ್ ನಾಯಕ್, ಎಂ.ಬಿ. ಪಾಟೀಲ್, ರಹೀಂ ಖಾನ್, ಇ. ತುಕಾರಾಂ ಹಾಗೂ ಆರ್.ಬಿ. ತಿಮ್ಮಾಪುರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆಂದು ತಿಳಿದುಬಂದಿದೆ.

      ಇಂದು ಸಂಜೆ 5.20ಕ್ಕೆ ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ 8 ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ