ಬೆಳಗಾವಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲೇ ಇಬ್ಬರ ಸಾವು!!

ಬೆಳಗಾವಿ:

      ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಣಗಾಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

      ವೈಭವ ವಾಡ್ಕರ್(21) ಹಾಗೂ ದಿಗ್ವಿಜಯ ಸಚಿನ್ ಪಾಟೀಲ್(30) ಮೃತಪಟ್ಟ ದುರ್ದೈವಿಗಳು. ಇವರು ಮಹಾರಾಷ್ಟ್ರ ಕೊಲ್ಲಾಪುರ ಜಿಲ್ಲೆಯ ದಿಂಡಿನೆರಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ.

       ಕಾರು ನಿಪ್ಪಾಣಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಅಪಘಾತದಲ್ಲಿ ಗಾಯಗೊಂಡ 8 ಮಂದಿಯನ್ನು ಕೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.  

      ಸಂಕೇಶ್ವರ ಪೊಲೀಸ್​ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap