ಚಿಕ್ಕಮಗಳೂರು :
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ.
ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತುರಾಜ್ (28) ಮೃತ ದುರ್ದೈವಿಗಳು. ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ