ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ : ಶಾಕ್​ನಿಂದ ಮೂವರು ಬಲಿ

ಶಿವಮೊಗ್ಗ:

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಕ್​ನಿಂದ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. 

     ಕಲಾವತಿ (65), ಲೋಹಿತ್ (36), ಶಶಾಂಕ್ (10) ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ದೈವಿಗಳು. 

    ರಿಪ್ಪನ್ ಪೇಟೆ ನಿವಾಸಿಗಳಾದ ಕುಟುಂಬ ಮಂಜುನಾಥನ ದರ್ಶನ ಪಡೆಯಲು ಕಾರಿನಲ್ಲಿ ಆರು ಮಂದಿ ಧರ್ಮಸ್ಥಳಕ್ಕೆ ಹೋಗಿದ್ದರು. ಇಂದು ಬೆಳಗ್ಗೆ ಧರ್ಮಸ್ಥಳದಿಂದ ರಿಪ್ಪನ್ ಪೇಟೆಗೆ ವಾಪಸಾಗುತ್ತಿದ್ದ ವೇಳೆ ಗರ್ತಿಕೆರೆ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಇನ್ನುಳಿದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ