ಕಲಬುರಗಿ:
ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕುದ್ರಿಮೋದಿ ಕ್ರಾಸ್ ಬಳಿ ಸಂಭವಿಸಿದೆ.
ರೋಷನ್ ದರ್ಗಿ (20), ಸಂತೋಷ್ (24) ಮೃತ ದುರ್ದೈವಿಗಳು. ಮೃತರು ಮೂಲತಃ ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿಗಳು ಎಂದು ತಿಳಿದು ಬಂದಿದೆ.
ಮೃತರು ಹುಮನಾಬಾದ್ ನಿಂದ ಕಲಬುರಗಿಗೆ ಸ್ವಿಫ್ಟ್ ಕಾರ್ ನಲ್ಲಿ ಬರುತ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಮತ್ತಿಬ್ಬರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ