ಪಾಟ್ನಾ :
ಟ್ರಕ್ ಮತ್ತು ಆಟೋ ನಡುವೆ ಢಿಕ್ಕಿ ಸಂಭವಿಸಿದ ಅಪಘಾತದಲ್ಲಿ 3 ಮಕ್ಕಳು ಸೇರಿದಂತೆ 5 ಮಂದಿ ಮೃತಪಟ್ಟಿರುವ ಘಟನೆ ಮುಜಾಫರ್ಪುರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಆಟೋ ಚಾಲಕನಿಗೆ ನಿದ್ರೆಯ ಮಂಪರು ಆವರಿಸಿದ ಕಾರಣದಿಂದ ಈ ನಿಯಂತ್ರಣ ತಪ್ಪಿ ಬಂದ ಆಟೋ ನಿಂತಿದ್ದ ಟ್ರಕ್ ಹಿಂಭಾಗಕ್ಕೆ ಗುದ್ದಿದ ಪರಿಣಾಮ 3 ಮಕ್ಕಳು ಸೇರಿದಂತೆ 5 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಘಟನೆಯಲ್ಲಿ ಹತ್ತು ಮಂದಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Bihar: 5 persons, including 3 children, dead after a collision between a truck&an auto in Muzaffarpur. AR Ghosh, District Magistrate Muzaffarpur, says,“Compensation of Rs. 4 lakhs each will be given to family of the deceased. Investigation on to find cause of accident" pic.twitter.com/unyy40sUfu
— ANI (@ANI) November 5, 2019
ಮೃತಪಟ್ಟವರ ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ರೋಹಿಡಾ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ