ಕೋಲಾರ:
ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಕೆಳಗೆ ದಂಪತಿ ಸಿಲುಕಿಕೊಂಡರೂ ಪವಾಡಸದೃಶವಾಗಿ ಪಾರಾಗಿ ಬಂದ ಘಟನೆ ಕೋಲಾರ ಮತ್ತು ಆಂಧ್ರ ಗಡಿಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಘಟನೆ ಏಪ್ರಿಲ್ 1 ರಂದು ಗಂಗಾವರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿ ಪಕ್ಕದಲ್ಲಿದ್ದ ಅಂಗಡಿಗೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯಗಳು ಸೆರೆಯಾಗಿದೆ. ಈ ಅಪಘಾತದಿಂದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಂಪತಿ ಬೈಕಿನಲ್ಲಿ ಹೋಗುತ್ತಿದ್ದರು, ಚಿತ್ತೂರು ಜಿಲ್ಲೆಯ ಪಲಮನೇರು ಗಂಗಾವರಂ ಬಳಿ ಬೈಕ್‌ಗೆ ಹಿಂದಿನಿಂದ ಕಾರು ಬಂದು ಡಿಕ್ಕಿ ಹೊಡೆದಿದೆ ಆ ರಭಸಕ್ಕೆ ಬೈಕಿನಿಂದ ಹಾರಿ ಕಾರಿನ ಚಕ್ರಕ್ಕೆ ಸಿಲುಕಿದ್ದಾರೆ. ತಕ್ಷಣವೇ ಕಾರಿನ ಚಾಲಕ ಬ್ರೇಕ್ ಹಾಕಿದ್ದರಿಂದ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
