ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರ ದುರ್ಮರಣ!!!

0
25

ಚಿತ್ರದುರ್ಗ :

      ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮತ್ತೊಂದು ಕಾರು ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಬೊಗಳೆರಹಟ್ಟಿ ಬಳಿ ನಡೆದಿದೆ.

      ಅಪಘಾತದಲ್ಲಿ ಮೃತರಾದವರನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಮಗಾರಕ್ಕನಗುಡ್ಡದ ಕೇಶವಮೂರ್ತಿ (40), ನಾಗಮ್ಮ (30) ಮತ್ತು ರಾಧಿಕಾ (22) ಎಂದು ಗುರುತಿಸಲಾಗಿದೆ. ಮೃತರು ಜಗಳೂರಿನಿಂದ ಚಿತ್ರದುರ್ಗಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.

      ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ಬೊಗಳೆರಹಟ್ಟಿ ಬಳಿ ಮತ್ತೊಂದು ಕಾರು ಮತ್ತು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

     ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಯುವತಿಗೆ ಗಂಭೀರ ಗಾಯಗಳಾಗಿದ್ದು, ಚಿಕೆತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. 

      ತುರುವನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here