ಬೆಂಗಳೂರು:
ಕೆಲ ದಿನಗಳ ಹಿಂದೆ ಪಾಲಿಕೆಯ ದಾಖಲೆ ಕೊಠಡಿಯಲ್ಲಿ ಇಲಿಗಳ ಹಾವಳಿ ಹೆಚ್ಚಾಗಿದೆ ಎಂದು ಇಲಿ ಬೇಟೆ ಆರಂಭಿಸಿದ್ದ ಪಾಲಿಕೆಗೆ ಬೆಕ್ಕುಗಳ ಬೇಟೆಗೆ ಕಾಟ ಜಾಸ್ತಿಯಾಗಿದೆ.
ಹೌದು, ರಾಜಭವನದಲ್ಲಿ ಬೆಕ್ಕುಗಳ ಹಾವಳಿ ಹೆಚ್ಚಾಗಿದ್ದು ಅವುಗಳನ್ನು ಹಿಡಿದು ನಿಯಂತ್ರಿಸುವ ಹಾಗೂ ಪುನರ್ವಸತಿ ಕಲ್ಪಿಸುವಂತೆ ರಾಜಭವನದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಿಬಿಎಂಪಿಯ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾಲಿಕೆಯ ಪಶುಪಾಲನಾ ಇಲಾಖೆಯ ಅಧಿಕಾರಿಗಳು ರಾಜಭವನಕ್ಕೆ ತೆರಳಿ, ಬೆಕ್ಕುಗಳನ್ನು ಹಿಡಿಯಲು ಯೋಜನೆ ರೂಪಿಸುತ್ತಿದ್ದಾರೆ.
ರಾಜಭವನದಲ್ಲಿ ಹೆಚ್ಚಾಗಿರುವ ಬೆಕ್ಕುಗಳನ್ನು ಹಿಡಿದು ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುವ ಉದ್ದೇಶದಿಂದ ಈಗಾಗಲೇ ಒಂದು ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಬೆಕ್ಕು ಬೇಟೆ ತಂಡ ರಾಜಭವನಕ್ಕೆ ಭೇಟಿ ನೀಡಿ ಕ್ಯಾಟ್ ಆಪರೇಷನ್ ಆರಂಭಿಸಲಿದೆಯಂತೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
