ನವದೆಹಲಿ :
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿ.ಕೆ. ಶಿವಕುಮಾರ್ ಗೆ ಸೇರಿದ 15 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಎಸ್ಪಿ ಥಾಮ್ಸನ್ ಜೋಸ್ ನೇತೃತ್ವದಲ್ಲಿ ಸುಮಾರು 60 ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಗೌಪ್ಯತೆ ಕಾಪಾಡಿಕೊಂಡು ದಾಳಿ ನಡೆಸಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.
ನಿನ್ನೆ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದಿದ್ದ ತನಿಖಾ ತಂಡ ಸಣ್ಣ ಸುಳಿವನ್ನೂ ಸಹ ಬಿಡದೆ ದಾಳಿ ನಡೆಸಿದ್ದು, ಈ ಮೂಲಕ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ನಿವಾಸದ ಮೇಲೆಯೂ ದಾಳಿ ನಡೆಸಲಾಗಿದ್ದು, ಇನ್ನು ಪರಿಶೀಲನೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ