ಸಿಬಿಐ ದಾಳಿ ವೇಳೆ ಡಿ.ಕೆ.ಶಿ ನಿವಾಸದಲ್ಲಿ 50 ಲಕ್ಷ ಹಣ ಪತ್ತೆ!!

ಬೆಂಗಳೂರು:

     ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದ್ದು, ದಾಳಿಯ ವೇಳೆ 50 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಡಿಕೆಶಿ ಯನ್ನು ವಶಕ್ಕೆ ಪಡೆಯಲು ಸಿಬಿಐ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

    ಬೆಳಗ್ಗೆ 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಸದಾಶಿವನಗರ, ಕನಕಪುರ, ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 50 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಸಿಕ್ಕ ಹಣಕ್ಕೆ ದಾಖಲೆಗಳು ಇವೆಯೇ? ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. 

     ಈಗಾಗಲೇ ಸಿಬಿಐ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದು, ಅವರ ನಿವಾಸ, ಸಿಬಿಐ ಕಚೇರಿ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಡಿ. ಕೆ. ಶಿವಕುಮಾರ್‌ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link