ಮೈಸೂರು :
ನೇಣು ಹಾಕಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಜಿಲ್ಲೆ ಟಿ. ನರಸಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ವೆಂಕಟಪ್ಪ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ನೀಡಿದೆ.
ಹೆಂಡತಿಯ ಸಾವಿಗೆ ಕಾರಣನಾಗಿದ್ದಾನೆ ಎಂಬ ಪೋಷಕರ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ವೆಂಕಟಪ್ಪನನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಸಮಾಜ ಕಲ್ಯಾಣ ಇಲಾಕೆ ಸಚಿವೆ ಶಶಿಕಲಾ ಜೊಲ್ಲೆ ಅವರು, ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನಲ್ಲಿ ಸಿಡಿಪಿಒ ಆಗಿರುವ ವೆಂಕಟಪ್ಪ ತನ್ನ ಪತ್ನಿಗೆ ಹೊಡೆದು, ಬಡೆದು ಅವಳನ್ನು ನೇಣು ಹಾಕಿರುವ ವಿಷಯ ಬೆಳಕಿಗೆ ಬಂದಿತ್ತು. ಸಮಾಜ ಕಲ್ಯಾಣ ಇಲಾಖೆಯ ಮೈಸೂರು ಜಿಲ್ಲೆಯ ಉಪನಿರ್ದೇಶಕರಿಂದ ಇಲಾಖಾ ತನಿಖೆ ನಡೆಸಿ ವರದಿ ಕೊಡುವಂತೆ ಆದೇಶ ಮಾಡಿದ್ದೆ. ಅದರಂತೆ ಇಲಾಖಾ ವರದಿ ಬಂದಿದ್ದು, ಜೊತೆಗೆ ಈ ಬಗ್ಗೆ FIR ಸೇರಿದಂತೆ ಉಳಿದ ವಿಚಾರಣೆ ವರದಿಗಳನ್ನು ನೋಡಿದಾಗ ಕಳೆದ ಹಲವು ವರ್ಷಗಳಿಂದ ಹೆಂಡತಿಗೆ ಪತಿ ವೆಂಕಟಪ್ಪ ದೈಹಿಕ ಹಿಂಸೆ ಕೊಡುತ್ತಿದ್ದರು ಎಂಬುದು ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
