ಮೈಸೂರು:
ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ತನ್ನ ಪತ್ನಿಯ ಕೊಲೆ ಯತ್ನ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ತಿ.ನರಸೀಪುರ ತಾಲೂಕಿನಲ್ಲಿ ಸಹಾಯಕ ಶಿಶು ಯೋಜಾನ ಅಧಿಕಾರಿ ವೆಂಕಟಪ್ಪ ತನ್ನ ಪತ್ನಿ ನಾಗವೇಣಿ(41) ಅಲಿಯಾಸ್ ಮಣಿ ಎಂಬುವವರನ್ನು ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದರು ಎನ್ನಲಾಗಿದೆ.
ಅಸ್ವಸ್ಥಗೊಂಡಿದ್ದ ಆಕೆಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. 4 ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಇತ್ತೀಚಿಗೆ ವೆಂಕಟಪ್ಪ ಮಾನಸಿಕ ಹಾಗೂ ದೈಹಿಕವಾಗಿ ಮಗಳಿಗೆ ಕಿರುಕುಳ ನೀಡುತ್ತಿದ್ದನು. ಆದರೆ ಮಾರ್ಚ್ 3ರಂದು ಮನೆಯಲ್ಲಿ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದ ಎಂದು ಪೋಷಕರು ಆರೋಪ ಮಾಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
