ನವದೆಹಲಿ:
ಪ್ರವಾಹದಿಂದಾಗಿ ಕೊಡಗು ಸೇರಿ ರಾಜ್ಯದ 8 ಜಿಲ್ಲೆಗಳಲ್ಲಿ ಅಪಾರ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 546.21 ಕೋಟಿ ರೂ. ನೆರವು ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಮತ್ತು ಗೃಹ ಕಾರ್ಯದರ್ಶಿ ರಾಜೀವ್ ಗೌಬ್ ಒಳಗೊಂಡ ಉನ್ನತ ಮಟ್ಟದ ಸಮಿತಿ ಸೋಮವಾರ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದೆ.
ಕಳೆದ ಆಗಸ್ಟ್ನಲ್ಲಿ ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಪ್ರವಾಹದಿಂದಾಗಿ ಬೆಳೆ, ಆಸ್ತಿ ಹಾನಿಯಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೀಡಿದ ಮನವಿ ಮತ್ತು ಕೇಂದ್ರದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಗ್ರಹಿಸಿದ ಮಾಹಿತಿ ಆಧರಿಸಿ ರೂ.546.21 ಮಂಜೂರು ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
