ನಾಳೆಯಿಂದ ರಾಜ್ಯಾದ್ಯಂತ 530 ಕೇಂದ್ರಗಳಲ್ಲಿ `CET’ ಪರೀಕ್ಷೆ!!

ಬೆಂಗಳೂರು : 

     ರಾಜ್ಯಾದ್ಯಂತ 530 ಕೇಂದ್ರಗಳಲ್ಲಿ ನಾಳೆಯಿಂದ ಆಗಸ್ಟ್ 30ರವರೆಗೆ ಸಿಇಟಿ (CET) ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

     ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆಗಸ್ಟ್ 30 ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದ್ದು,  ಪರೀಕ್ಷೆಯನ್ನು (ಸಿ.ಇ.ಟಿ. 2021) ನಡೆಸಲು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

     ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು ರಾಜ್ಯಾದ್ಯಂತ 530 ಕೇಂದ್ರಗಳಲ್ಲಿ ಮತ್ತೆ ಬೆಂಗಳೂರಿನಲ್ಲಿ 86 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಸೋಂಕಿತರು ಮತ್ತು ಶಂಕಿತರಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದರು.

      ಆ. 28ರಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದರು. 

       ಪರೀಕ್ಷೆ ನಡೆಯುವ ದಿನಗಳಂದು ಗೃಹ ಇಲಾಖೆಯು ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಲಿದೆ. ಜೊತೆಗೆ ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂದು ಸಚಿವ ಹೇಳಿದ್ದಾರೆ.

       ಇನ್ನು ಕೊರೊನಾ ಸೋಂಕಿತರಿಗೆ ಐಸೋಲೇಷನ್ ಸೆಂಟರ್ ನಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲಾಗುತ್ತದೆ. ಗಡಿ ಭಾಗದ ಜಿಲ್ಲೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap