ಬೆಂಗಳೂರು:
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಎಪ್ರಿಲ್ 23 ಮತ್ತು 24ರಂದು ನಿಗಧಿಯಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ಮುಂದೂಡಲಾಗಿದೆ.
ಲೋಕಸಭೆ ಚುನಾವಣೆ ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯಲಿದ್ದು, ಎರಡನೇ ಹಂತದ ಚುನಾವಣೆ ಎ.23ರಂದು ನಡೆಯಲಿದೆ. ಏ. 23ರಂದು ಜೀವಶಾಸ್ತ್ರ, ಗಣಿತ ಮತ್ತು ಏ. 24ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಸಿಇಟಿ ಪರೀಕ್ಷೆಯೂ ಅದೇ ದಿನ ಇದ್ದು, ಪರೀಕ್ಷೆಗೆ ಕೂರಲಿರುವ ಅಭ್ಯರ್ಥಿಗಳಿಗೆ ಮತದಾನ ಮಾಡಲು ಅಡ್ಡಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಸಭೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸಿಇಟಿ ಪರೀಕ್ಷೆ ಹೊಸ ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ಇಂಜಿನಿಯರಿಂಗ್ ಸೇರಿದಂತೆ ಇತರೆ ತಾಂತ್ರಿಕ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಸಿಇಟಿ ವೇಳಾಪಟ್ಟಿ ಪ್ರಕಟಿಸಿತ್ತು.
ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯಗಳ ಯುವಕ-ಯುವತಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಹೀಗಾಗಿ ಪರೀಕ್ಷೆ ದಿನಾಂಕ ಬದಲಾವಣೆ ಕುರಿತು ನಿರ್ಧರಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ