ಬೆಂಗಳೂರು:
ವೃದ್ದೆಗೆ ಚಾಕು ತೋರಿಸಿ ಬೆದರಿಸಿ ಚಿನ್ನದ ಸರ ಕಳವು ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸಮೀಪದ ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವೃದ್ಧೆ ಸುಶೀಲಮ್ಮ(60) ಮೊಮ್ಮಗನ ಜೊತೆ ವಾಯು ವಿಹಾರಕ್ಕೆ ತೆರಳಿದ್ದಾಗ, ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಚಾಕು ತೋರಿಸಿ ಸರಸ್ವತಮ್ಮ ಅವರನ್ನು ಬೆದರಿಸಿದ್ದಾರೆ. ಹಲ್ಲೆ ನಡೆಸಿ 45 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ.
ಈ ವೇಳೆ ಕೆಳಗೆ ಬಿದ್ದ ಸರಸ್ವತಮ್ಮ ಅವರ ಕೈ, ಕಾಲು, ಕುತ್ತಿಗೆಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರಗಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ