ಬಸ್ ಸ್ಟೇರಿಂಗ್ ಕಟ್ : ಡ್ರೈವರ್ ಸಮಯಪ್ರಜ್ಞೆಯಿಂದ 50 ಮಂದಿ ಬಚಾವ್!!

ಚಾಮರಾಜನಗರ : 

      ಕೆಎಸ್‌ಆರ್ ಟಿಸಿ ಬಸ್ ಸ್ಟೀರಿಂಗ್ ತುಂಡಾಗಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ 50 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

      ಮಲೆಮಹದೇಶ್ವರ ಬೆಟ್ಟದ ತಾಳುಬೆಟ್ಟ-ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಸಂಜೆ ಕೆಎಸ್‌ಆರ್ ಟಿಸಿ ಬಸ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತ ಸ್ಟೇರಿಂಗ್ ಕಟ್ ಆಗಿದೆ. ಇದನ್ನು ಅರಿತ ಬಸ್ ಚಾಲಕ ಪ್ರಪಾತಕ್ಕೆ ಬೀಳಬೇಕಿದ್ದ ಬಸ್ ನ್ನು ಮರಕ್ಕೆ ಹೊಡೆಸಿದ್ದಾನೆ. ಇದರಿಂದ ಬಸ್ ನಲ್ಲಿದ್ದ 50 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ.

      ಘಟನೆಯಲ್ಲಿ ಚಾಲಕ ಸೇರಿದಂತೆ 6 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ಬಸ್ ಹದಗೆಟ್ಟಿರುವುದೇ ಮೂಲ ಕಾರಣ ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link