ವಿಜಯಪುರ:
ನಿಡಗುಂದಿ ತಾಲ್ಲೂಕು ಗೊಳಸಂಗಿ ಗ್ರಾಮದಲ್ಲಿ ಕಿಡಿಗೇಡಿಗಳು ಬಸವಣ್ಣನ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದಾರೆ.
ಶನಿವಾರ ಬೆಳಿಗ್ಗೆ ಪೂಜೆಗೆ ತೆರಳಿದ್ದಾಗ ಈ ಕೃತ್ಯ ಬಯಲಾಗಿದೆ.
ಶುಕ್ರವಾರ ತಡರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.
ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಸವರಾಜ್ ಅವಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ