ಬೆಂಗಳೂರು:
ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ತತ್ಕ್ಷಣವೇ 50 ಕೋ. ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.
ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕೋವಿಡ್-19ಕ್ಕೆ ಚಿಕಿತ್ಸೆ ಪಡೆಯುತ್ತಿರುವ ಅವರು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಬಹುತೇಕ ಕಡೆ ಭಾರೀ ಮಳೆಯಾಗುತ್ತಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರೊಂದಿಗೆ ದೂರವಾಣಿ ಕರೆಯಲ್ಲಿ ಚರ್ಚಿಸಿದ ಯಡಿಯೂರಪ್ಪ ಅವರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕ್ಷೇತ್ರ ಬಿಟ್ಟು ಹೋಗದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈಗಾಗಲೇ 50 ಕೋಟಿ ಹಣ ಬಿಡುಗಡೆ ಮಾಡಿದ್ದು ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿಗಳು ಅತಿ ತುರ್ತು ಕೆಲಸಗಳಿಗೆ ನೀವೆ ತೀರ್ಮಾನ ತೆಗೆದುಕೊಂಡು ಮುಂದುವರೆಯಬೇಕು ಅಂತ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ