ಬೆಂಗಳೂರು:
ಜೆ.ಸಿ ಮಾಧುಸ್ವಾಮಿ ಅವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಬಂದು 25 ದಿನಗಳ ಬಳಿಕ ಸಂಪುಟವಿಸ್ತರಣೆ ಕುತೂಹಲಕ್ಕೆ ಇಂದು ತೆರೆ ಬಿದ್ದಿದ್ದು, ರಾಜಭವನದ ಗಾಜಿನಮನೆಯಲ್ಲಿ ಸಚಚಿವ ಸಂಪುಟದ ಹೊಸ 17 ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ವೇಳೆ ಶಾಸಕ ಜೆ.ಸಿ.ಮಾಧುಸ್ವಾಮಿ ರವರು, ರಾಜ್ಯದ ಸಚಿವನಾಗಿ ಎಂದು ಹೇಳುವ ಬದಲು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದೇನೆ ಎಂದು ಜೆ.ಸಿ.ಮಾಧುಸ್ವಾಮಿ ಪ್ರಮಾಣ ವಚನ ಸ್ವೀಕಾರದ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ಕೂಡಲೇ ತನ್ನ ತಪ್ಪಿನ ಅರಿವಾಗಿ ಮಂತ್ರಿಯಾಗಿ ಎಂದು ಹೇಳುತ್ತಾ ನಸುನಕ್ಕರು. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ನವರು ನಗೆಗಡಲಲ್ಲಿ ತೇಲಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ