ತರಿಕೆರೆ : ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ!!

ಚಿಕ್ಕಮಗಳೂರು :

     ಟವೇರಾ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಶಿವಪುರ ಡಾಬಾ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ.

      ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಮೂಲದ ರಾಜು (65), ಜ್ಯೋತಿ (14) ಮತ್ತು ಸುಬ್ಬಲಕ್ಷ್ಮೀ (60) ಮೃತ ದುರ್ದೈವಿಗಳು. 

      ಡಿಕ್ಕಿಯ ರಭಸಕ್ಕೆ ಕಾರುಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap