ಚಿಕ್ಕಮಗಳೂರು:
ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಭೂಮಿ ಖರೀದಿ ವಿಚಾರವಾಗಿ ಮಾತುಕತೆ ನಡೆಸಲಾಗುತ್ತಿತ್ತು. ಈ ವೇಳೆ ಬೆಂಗಳೂರು ಮೂಲದ ಇಬ್ಬರು ವ್ಯಕ್ತಿಗಳು, ಕಲ್ಯಾಣ್ ಕುಮಾರ್ ಹಾಗೂ ಉಪನ್ಯಾಸಕ ಸುಮಂತ್ ಎಂಬುವವರ ಮೇಲೆ ಗುಂಡು ಹಾರಿಸಿ, ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಗಳು ನಾಪತ್ತೆಯಾಗಿದ್ದಾರೆ.
ಘಟನೆಯಲ್ಲಿ ಇಬ್ಬರ ಎದೆ, ಪಕ್ಕೆಗೆ ಗುಂಡೇಟು ಬಿದ್ದಿದ್ದು, ಗುಂಡೇಟು ತಿಂದ ಕಲ್ಯಾಣ್ ಕುಮಾರ್ ಹಾಗೂ ಸುಮಂತ್ ಅವರ ದೇಹದಲ್ಲಿ ಗುಂಡುಗಳು ಹಾಗೇ ಇದ್ದು, ಅವುಗಳನ್ನು ತೆಗೆಯಲು ಇಬ್ಬರನ್ನೂ ಬೆಂಗಳೂರಿಗೆ ರವಾನಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ