ಚಿಕ್ಕಮಗಳೂರು:
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಒಂದು ಪಲ್ಟಿಯಾಗಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಶೃಂಗೇರಿಗೆ ಪ್ರವಾಸ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ದಿಯಾ (16) ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ. ದಿಯಾ ಅವರು ಭದ್ರಾವತಿಯ ವಿಐಎಸ್ಎಲ್ ಕಾಲೊನಿ ನಿವಾಸಿ ಕರ್ನಲ್ ಶೆಖಾವತ್ ಪುತ್ರಿ ಎಂದು ತಿಳಿದುಬಂದಿದೆ.
ತೀವ್ರವಾಗಿ ಗಾಯಗೊಂಡಿರುವ ಕಿಶನ್, ನಂದನ್, ಯಶಸ್ವಿ, ಸುಮುಖ ಮತ್ತು ವೈಷ್ಣವಿ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
