ಚಿಕ್ಕಮಗಳೂರು:
ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಹಿರೇಗೌಜ ಗ್ರಾಮದಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ.
ಇಂದು ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದಲ್ಲಿ ಪ್ರಚಾರಕ್ಕಾಗಿ ಬೆಂಬಲಿಗರೊಂದಿಗೆ ಸಂಸದೆ ಶೋಭಾ ಕರಂದ್ಲಾಜೆ ಆಗಮಿಸಿದರು. ಆಗ ಗ್ರಾಮಸ್ಥರು, “ಇಷ್ಟು ದಿನ ಎಲ್ಲಿದ್ರಿ ಶೋಭಾ, ಮತ ಕೇಳಲು ನಿಮಗೆ ಯಾವ ನೈತಿಕತೆ ಇದೆ. ನೀರು ಕೊಡದಿದ್ದರೆ ಯಾರಿಗೂ ವೋಟ್ ಹಾಕಲ್ಲ,” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮಸ್ಥರ ಆಕ್ರೋಶದಿಂದಾಗಿ ಶೋಭಾ ಅಲ್ಲಿಂದ ತೆರಳಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಬಿಜೆಪಿ ಮುಖಂಡರೊಂದಿಗೆ ವಾಗ್ವಾದ ಕೂಡ ನಡೆಯಿತು. ಜೊತೆಯಲ್ಲಿದ್ದ ಜಿಲ್ಲಾ ಪಂಚಾಯಿತಿ ಬಿಜೆಪಿ ಮಾಜಿ ಸದಸ್ಯ ಕಲ್ಮರುಡಪ್ಪಗೆ ತರಾಟೆಗೆ ತೆಗೆದುಕೊಂಡರು.
ನೆನ್ನೆ ಕಡೂರಿನ ಬಿದರೆ ಗ್ರಾಮದಲ್ಲಿ ಘೇರಾವ್ ಹಾಕಿದ ಬೆನ್ನಲ್ಲೆ ಇಂದು ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮಸ್ಥರು ಸಂಸದರಿಗೆ ಘೇರಾವ್ ಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/shoba_vb_29.gif)