ಬೆಂಗಳೂರು:
ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ 13 ವರ್ಷದ ಬಾಲಕ ಉಸಿರುಗಟ್ಟಿ ಮಗುವೊಂದು ಮೃತಪಟ್ಟಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.
ಸಮೀರ್(13) ಮೃತ ಬಾಲಕ. ಇಂದು ಬೆಳಗ್ಗೆ 5 ಗಂಟೆಗೆ ಸಮೀರ್ ತಾಯಿ ಕಲಾವತಿ ಕೆಲಸಕ್ಕೆಂದು ಮನೆಯಿಂದ ಹೋಗಿದ್ದರು. ಈ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಲೀಕ್ ಆಗಿದೆ.
ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಸಮೀರ್ ಸಾವನ್ನಪ್ಪಿದ್ದು, ಇನ್ನೊಬ್ಬ ಬಾಲಕ ಶಶೀರ್ (11) ತೀವ್ರವಾಗಿ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಎಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೋಷಕರ ನಿರ್ಲಕ್ಷ್ಯಕ್ಕೆ 13 ವರ್ಷದ ಬಾಲಕ ಅನ್ಯಾಯವಾಗಿ ಬಲಿಯಾಗಿರುವ ಘಟನೆ ಇದಾಗಿದೆ. ಪೋಷಕರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/hal-collage-copy-1.gif)