ದೆಹಲಿ:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬ ಖಾರದ ಪುಡಿ ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ದಿಲ್ಲಿ ಸಚಿವಾಲಯ ಕಟ್ಟಡದ ಮೂರನೇ ಮಹಡಿಯಲ್ಲಿರುವ ತಮ್ಮ ಕೊಠಡಿಯಿಂದ ಮಧ್ಯಾಹ್ನ ಊಟಕ್ಕೆಂದು ಹೊರಬಂದ ವೇಳೆ ಈ ದಾಳಿ ನಡೆದಿದೆ. ದೆಹಲಿಯ ಸಚಿವಾಲಯದ ಎದುರು ಘಟನೆಯ ಸಂಭವಿಸಿದ್ದು, ಘಟನೆಯಿಂದಾಗಿ ಅರವಿಂದ್ ಕೇಜ್ರೀವಾಲ್ ಅವರು ಧರಿಸಿದ್ದ ಕನ್ನಡಕಕ್ಕೆ ಹಾನಿಯಾಗಿದೆ.
ಸಿಎಂ ಕೇಜ್ರೀವಾಲ್ ಮೇಲೆ ಖಾರದ ಪುಡಿ ಎರಚಿದ ವ್ಯಕ್ತಿಯನ್ನು ಅನಿಲ್ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ಅನಿಲ್ ಶರ್ಮಾನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆಮ್ ಆದ್ಮಿ, “ದಿಲ್ಲಿ ಪೊಲೀಸರಿಂದ ಗಂಭೀರ ಭದ್ರತಾ ಲೋಪ. ದಿಲ್ಲಿಯಲ್ಲಿ ಮುಖ್ಯಮಂತ್ರಿ ಕೂಡ ಸುರಕ್ಷಿತರಲ್ಲ” ಎಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
