ಕಲಬುರಗಿ :
ಚಿಂಚೋಳಿ ಉಪಚುನಾವಣೆಯಲ್ಲಿ ರಾಜಕೀಯ ಪರೀಕ್ಷೆ ಎದುರಿಸಲು ನಿಂತಿರುವ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ತಮ್ಮ ವೃತ್ತಿ ಜೀವನದಲ್ಲೂ ಪರೀಕ್ಷೆ ಬರೆಯಲು ನಿಂತಿದ್ದಾರೆ.
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಪ್ರಚಾರದ ನಡುವೆಯೂ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಎಂಡಿ ಪರೀಕ್ಷೆಗೆ ಹಾಜರಾಗಿದ್ದಾರೆ.
ಮೇ. 19 ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಕಲಬುರಗಿ ಎಂಆರ್ ಎಂಸಿ ಕಾಲೇಜಿನಲ್ಲಿ ನಡೆಯುತ್ತಿರುವ ಎಂಡಿ ಪರೀಕ್ಷೆಗೆ ಹಾಜರಾಗಿದ್ದಾರೆ.
ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ, ಬಾಬುರಾವ್ ಚಿಂಚನಸೂರ ನೇತೃತ್ವದಲ್ಲಿ ಎರಡು ತಂಡಗಳಿಂದ ಭರ್ಜರಿ ಪ್ರಚಾರ ನಡೆಸಲಾಗುತ್ತಿದೆ. ಎರಡು ತಂಡಗಳು ಪ್ರತಿ ದಿನ 18 ಗ್ರಾಮಗಳಲ್ಲಿ ಮತಯಾಚನೆ ನಡೆಸುತ್ತಿದ್ದು, ಪ್ರತಿನಿತ್ಯ 36 ಗ್ರಾಮಗಳಲ್ಲಿ ಬಿಜೆಪಿಯಿಂದ ಪ್ರಚಾರ ನಡೆಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
