ಚಿಂಚೋಳಿ ವಿಧಾನಸಭಾ ಉಪಚುನಾವಣೆ :ಕೆ.ರತ್ನಪ್ರಭಾ ಕಣಕ್ಕೆ!!?

ಬೆಂಗಳೂರು:

      ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾದ ಚಿಂಚೋಳಿ ವಿಧಾನಸಭೆ ಕ್ಷೇತ್ರದಿಂದ ಮಾಜಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗಿದೆ.

       ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿರುವ ಈ ಕ್ಷೇತ್ರದಲ್ಲಿ ಕಳೆದ ಬಾರಿ ಉಮೇಶ್ ಜಾಧವ್‌ ಅವರು ಕಾಂಗ್ರೆಸ್‌ ನಿಂದ 73905 ಮತವನ್ನು ಪಡೆದುಕೊಂಡಿದ್ದರು, ಇದಲ್ಲದೇ ಬಿಜೆಪಿಯಿಂದ ಸುನೀಲ್ ವಲ್ಯಾಪುರೆ ಅವರು 54693 ಮತಗಳನ್ನು ಪಡೆದುಕೊಂಡಿದ್ದರು.

      ಸಹಜವಾಗಿ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪ್ರಾಬಲ್ಯವಿರುವುದು ಕಾಣುತ್ತಿದೆ. ಆದರೆ ಸರಕಾರದ ಉನ್ನತ ಹುದ್ದೆಯಲ್ಲಿದ್ದ ವ್ಯಕ್ತಿಯೊಬ್ಬರು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಮುಂದಾದರೇ ಮತದಾರರು ಆ ಕಡೆ ಮನಸ್ಸು ಮಾಡುವುದರಲ್ಲಿ ಅನುಮಾನವಿಲ್ಲ.

      ಈಗಾಗಲೇ ಬಿಜೆಪಿಯ ಹಿರಿಯ ನಾಯಕರು ಕೂಡ ಚಿಂಚೋಳಿ ಕ್ಷೇತ್ರದಲ್ಲಿ ಸಂಚಾರ ಮಾಡುವಂತೆ ರತ್ನಪ್ರಭಾ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

      ಮೇ.19ರಂದು ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಇದೇ 29 ಕಡೆಯ ದಿನವಾಗಿದೆ. 2ನೇ ಹಂತದ ಲೋಕಸಭೆ ಚುನಾವಣೆ ಮತದಾನ ಮಂಗಳವಾರ ನಡೆಯಲಿದ್ದು, ಬಳಿಕ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap