ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಬಿಎಂಪಿಯಿಂದ 50 ಸಾವಿರ ದಂಡ!!

ಬೆಂಗಳೂರು :

      ಪ್ಲಾಸ್ಟಿಕ್ ಬಳಕೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ಸಿಎ)ಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

      ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಈ ವೇಳೆ ಕ್ರಿಕೆಟ್ ಅಭಿಮಾನಿಗಳು ಪ್ಲಾಸ್ಟಿಕ್ ಬಳಸಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೆಎಸ್ ಸಿಎಗೆ ದಂಡ ವಿಧಿಸಿದೆ.

      ಬಿಬಿಎಂಪಿಯ ಪೂರ್ವ ವಲಯದ ಉಪ ಆರೋಗ್ಯಾಧಿಕಾರಿ ಅವರು ದಂಡದ ನೋಟಿಸ್‌ ಅನ್ನು ಕ್ರೀಡಾಂಗಣದ ವ್ಯವಸ್ಥಾಪಕರಿಗೆ ಸೋಮವಾರ ತಲುಪಿಸಿದ್ದಾರೆ. ಈ ನೋಟಿಸ್‌ನ ಛಾಯಾಚಿತ್ರವನ್ನು ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

      ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧವಿದ್ದರೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿರುವಾಗಲೇ ಪ್ಲಾಸ್ಟಿಕ್ ಕಪ್, ಬ್ಯಾನರ್ ಬಳಸಿರುವುದು ಆರೋಗ್ಯಾಧಿಕಾರಿಗಳ ತಪಾಸಣೆ ವೇಳೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದ್ದು ಮತ್ತೆ ಇದು ಮರುಕಳಿಸದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link