ಚಿತ್ರದುರ್ಗ :
ಎರಡು ಬಸ್, ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಪಟ್ರೇಹಳ್ಳಿ ಬಳಿ ಶನಿವಾರ ಮುಂಜಾನೆ ನಡೆದಿದೆ.
ಮೃತರನ್ನು ಹಾವೇರಿ ಮೂಲದ ಲತಾ (28), ಅತ್ತಿಬೆಲೆ ಮೂಲದ ಶಶಿಕುಮಾರ್ (26) ಎಂದು ಗುರುತಿಸಲಾಗಿದೆ. ಇನ್ನು ಶ್ರುತಿ (03), ಜ್ಯೋತಿ (25), ಜಾಗೃತಿ (04), ದ್ಯಾಮಣ್ಣ (24) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆದ್ದಾರಿಯ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪದಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್, ಇಂಡಿಕಾ ಕಾರು, ಮಾರುತಿ ಒಮ್ನಿ, ಕ್ಯಾಂಟರ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಓಮಿನಿ ಕಾರು ಹಾಗೂ ಟಾಟಾ ಏಸ್ ವಾಹನದಲ್ಲಿ ಇದ್ದವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ವಿಷಯ ತಿಳಿದ ತಕ್ಷಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
