ಚಿತ್ರದುರ್ಗ:
ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಅಕ್ಕಿ ಸಮೇತ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರಿಗೆ ಅಕ್ರಮವಾಗಿ 14.5 ಟನ್ ಅಕ್ಕಿ ಪಡಿತರ ಅಕ್ಕಿಯನ್ನು ಸರಬರಾಜು ಮಾಡಲಾಗುತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ರಾಂಪುರ ಪೊಲೀಸರು ದಾಳಿ ನಡೆಸಿ, ಆರೋಪಿ ರಾಂಪುರದ ವೀರಭದ್ರೇಶ್ವರ ಟ್ರೇಡರ್ಸ್ ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ.
ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
