ಬೆಂಗಳೂರು:
ಈಗಲ್ಟನ್ ರೆಸಾರ್ಟ್ ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಪ್ರಾಯ ಮೂಡಿದೆ. ಬಳ್ಳಾರಿ ಜಿಲ್ಲೆಯ ಚರ್ಚೆಯ ವೇಳೆ ಬಳ್ಳಾರಿ ಶಾಸಕರಾದ ಆನಂದ ಸಿಂಗ್ ಮತ್ತು ಜೆ.ಎನ್.ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಜಗಳವಾಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಉಳಿದಿದ್ದರು. ಶನಿವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‍ಪಿ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದಾರೆ.
ಈ ವೇಳೆ ಹೊಸಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ನಡುವೆ ಮಾರಾಮಾರಿ ನಡೆದಿದ್ದು, ಪಾರ್ಟಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ. ಗಲಾಟೆಯಲ್ಲಿ ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಎನ್ನಲಾಗಿದೆ.
ಹಲ್ಲೆಗೆ ಕಾರಣ ..?
ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ತೆಕ್ಕೆಗೆ ಸೇರಲು ಮುಂದಾಗಿದ್ದ ಗಣೇಶ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಮತ್ತು ಕಾಂಗ್ರೆಸ್ ಹೈಕಮಾಂಡ್‍ಗೆ ಆನಂದ್ ಸಿಂಗ್ ಮಾಹಿತಿ ನೀಡಿದ್ದರು. ಆನಂದ್ ಸಿಂಗ್ ನೀಡುತ್ತಿದ್ದ ಮಾಹಿತಿ ಆಧಾರದ ಮೇಲೆಯೇ ಗಣೇಶ್ ರನ್ನ ಕಾಂಗ್ರೆಸ್ ನಾಯಕರುಗಳು ಬೆನ್ನುಹತ್ತಿದ್ದರು.
ಈಗ ಸಿಎಲ್‍ಪಿ ಸಭೆಯಲ್ಲಿ ಭಾಗವಹಿಸಿ ವಾಪಾಸ್ ಹೋಗಲು ಗಣೇಶ್ ಬಂದಿದ್ದರು. ಆದರೆ ಅನಿವಾರ್ಯವಾಗಿ ರೆಸಾರ್ಟ್ ನಲ್ಲಿ ಇರಬೇಕಾಯಿತು ಎಂದು ತಿಳಿದು ಬಂದಿದೆ. ಇದೇ ವಿಚಾರವಾಗಿ ನಾಲ್ಕು ದಿನದ ಹಿಂದೆ ಫೋನ್ ನಲ್ಲಿ ಶಾಸಕರುಗಳು ಬೈದಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ