ಮಂಡ್ಯ :
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.
ಮಂಡ್ಯ ಜಿಲ್ಲೆಯ ದೊಡ್ಡರಸಿಕೆರೆಯಲ್ಲಿ ಮತದಾನ ಮಾಡಲು ಸುಮಲತಾ ಅಂಬರೀಷ್ ಆಗಮಿಸಿದ್ದರು. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದ್ದರು. ಈ ವೇಳೆ ನಿಖಿಲ್ ಅವರನ್ನು ಹೆಗಲ ಮೇಲೆ ಹೊತ್ತುಕೊಂಡ ಬೆಂಬಲಿಗರು ನಿಖಿಲ್ಗೆ ಜೈಕಾರ ಕೂಗಿದರು. ಬೆಂಬಲಿಗರು ತಮ್ಮ ತಮ್ಮ ನಾಯಕರ ಪರ ಘೋಷಣೆ ಕೂಗಲು ಆರಂಭಿಸಿದರು. ಈ ವೇಳೆ ಪೊಲೀಸರು ಸುಮಲತಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಸುಮಲತಾ ಬೆಂಬಲಿಗರು ಪೊಲೀಸರ ವರ್ತನೆಗೆ ಆಕ್ರೋಶಗೊಂಡು ಸುಮಲತಾ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.
ಈ ವೇಳೆ ಪರಸ್ಪರರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಬೆಂಬಲಿಗರು ಮುಂದಾದರು. ನಂತರ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ