ಬೆಂಗಳೂರು:
ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಬಹಳ ವರ್ಷಗಳ ಹಿಂದೆ ಇದ್ದ 7ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಮತ್ತೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.
ಈ ಬಗ್ಗೆ ಸರ್ವ ಶಿಕ್ಷಣ ಅಭಿಯಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್, ಈ ಬಾರಿಯ ಶೈಕ್ಷಣಿಕ ವರ್ಷದಿಂದಲೇ 7 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು. ಆದರೆ, ಈ ಬಾರಿಯ ಪಬ್ಲಿಕ್ ಪರೀಕ್ಷೆಗಳನ್ನು ಪ್ರಾಯೋಗಿಕವಾಗಿ ನಡೆಸಲಾಗುವುದು. ಮತ್ತು ಈ ಬಾರಿಯ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡಲಾಗುವುದಿಲ್ಲ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.
ಮಕ್ಕಳನ್ನು 10ನೇ ತರಗತಿವರೆಗೆ ಫೇಲ್ ಮಾಡದೇ ಇದ್ದರೆ ಮಕ್ಕಳ ಶೈಕ್ಷಣಿಕ ಗುಣಮಟ್ಟಕ್ಕೆ ಹೊಡೆತ ಬೀಳುತ್ತದೆ. ಹೀಗಾಗಿ ಈ ವರ್ಷದಿಂದಲೇ 7ನೇ ತರಗತಿ ಪಬ್ಲಿಕ್ ಪರೀಕ್ಷೆ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಮಕ್ಕಳನ್ನು ಪಬ್ಲಿಕ್ ಪರೀಕ್ಷೆಗೆ ತಯಾರುಗೊಳಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ