ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಚಿಂತನೆ!!

0
12

ಬೆಂಗಳೂರು :

      ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ಇದ್ದು, ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

      ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣಬೈರೇಗೌಡ, ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮೋಡ ಬಿತ್ತನೆ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಮಾರು 88 ಕೋಟಿ ರೂ. ವೆಚ್ಚದಲ್ಲಿ ಮೋಡ ಬಿತ್ತನೆಗೆ ನಿರ್ಧಾರ ಮಾಡಿದ್ದೇವೆ ಎಂದರು.

      ರಾಜ್ಯಾದ್ಯಂತ ಮೋಡ ಬಿತ್ತನೆ ಮಾಡಲಿದ್ದು, ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಎರಡು ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಎರಡು ವಿಮಾನಗಳಲ್ಲಿ ಈ ಬಾರಿ ಮೋಡ ಬಿತ್ತನೆ ಮಾಡಲಾಗುತ್ತದೆ. ತಜ್ಞರ ಸಮಿತಿ ಕೂಡ ಮೋಡ ಬಿತ್ತನೆ ಅವಶ್ಯಕತೆ ಇದೆ ಎಂದು ತಿಳಿಸಿದೆ ಎಂದರು.

      ಈ ಬಾರಿ ಎರಡು ವರ್ಷದ ಅವಧಿಗೆ ಮೋಡ ಬಿತ್ತನೆ ನಡೆಯಲಿದ್ದು, ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here