ಬೆಂಗಳೂರು:
ರಾಜ್ಯದಲ್ಲಿ ಲೋಡ್ಶೆಡ್ಡಿಂಗ್ ಮಾಡುತ್ತಾರೆ ಎಂಬ ಭಯದಲ್ಲಿದ್ದ ಜನತೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಿಹಿ ಸುದ್ಧಿ ನೀಡಿದ್ದಾರೆ.
ಕಲ್ಲಿದ್ದಲು ಕೊರತೆಯ ಕಾರಣಕ್ಕೆ ಉಷ್ಣ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡ ಕಾರಣ ಅಧಿಕಾರಿಗಳು ಸೋಮವಾರ ಸಂಜೆಯಿಂದಲೇ ಅಘೋಷಿತ ಲೋಡ್ ಶೆಡ್ಡಿಂಗ್ ಆರಂಭಿಸಿದ್ದು, ರಾಜ್ಯದಲ್ಲಿ ಲೋಡ್ಶೆಡ್ಡಿಂಗ್ ಮಾಡಬಾರದು ಎಂದು ಸಿಎಂ ಕುಮಾರಸ್ವಾಮಿ ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿ ಒಟ್ಟು 5 ವಿಭಾಗಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೇಂದ್ರದ ಗ್ರಿಡ್ನಿಂದ ವಿದ್ಯುತ್ ಸಿಗದಿದ್ದರೂ ಲೋಡ್ಶೆಡ್ಡಿಂಗ್ ಇಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಲೋಡ್ಶೆಡ್ಡಿಂಗ್ ತಡೆ ನೀಡಲಾಗಿದೆ.
ಕಲ್ಲಿದ್ದಲು ದಾಸ್ತಾನು ಸಂಪೂರ್ಣ ಖಾಲಿಯಾಗಿದ್ದರಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಆರ್‌ಟಿಪಿಎಸ್) ನಾಲ್ಕು ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕಳೆದ ವಾರ ಸ್ಥಗಿತಗೊಂಡಿತ್ತು. ಭಾನುವಾರ ಎರಡು ಘಟಕಗಳು ಕಾರ್ಯಾರಂಭ ಮಾಡಿದ್ದವು. ಸೋಮವಾರ ಮೂರನೇ ಘಟಕ ಕೆಲಸ ಆರಂಭಿಸಿದೆ. ಇದರಿಂದಾಗಿ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ