ಅನರ್ಹರ ಸ್ಪರ್ಧೆಗೆ ಅಡ್ಡಿಯಾದವರಿಗೆ ನಿಗಮ-ಮಂಡಳಿ ಸ್ಥಾನ!!!

ಬೆಂಗಳೂರು:

      ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಅನರ್ಹರ ಸ್ಪರ್ಧೆಗೆ ಅಡ್ಡಿಯಾಗಿದ್ದ ನಾಯಕರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನವನ್ನು ಯಡಿಯೂರಪ್ಪ ನೀಡಿದ್ದಾರೆ.

      ಪಕ್ಷದೊಳಗೆ ಎದ್ದಿರುವ ಅಸಮಾಧಾನದ ಹೊಗೆಯನ್ನು ಶಮನ ಮಾಡಲು ಬಿಜೆಪಿಯು ನಿಗಮ-ಮಂಡಳಿ ಸ್ಥಾನಗಳನ್ನು ಗಾಳವಾಗಿ ಬಳಸಿಕೊಂಡಿದ್ದು, 8 ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಅತೃಪ್ತರಿಗೆ ನೀಡಿದೆ.

      ರಾಜ್ಯ ಸಚಿವ ದರ್ಜೆಯ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ನಿಗಮ/ ಮಂಡಳಿಗಳ ಅಧ್ಯಕ್ಷ/ ಉಪಾಧ್ಯಕ್ಷ ಸ್ಥಾನಕ್ಕೆ 8 ಮಂದಿಯನ್ನು ನೇಮಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಆದೇಶ ಪ್ರಕಟಿಸಿದ್ದಾರೆ.

      ಹೊಸಕೋಟೆ, ಹಿರೇಕೆರೂರು, ಕೆಆರ್ ಪುರಂ, ಹೊಸಪೇಟೆ, ಕಾಗವಾಡ, ಮಸ್ಕಿ, ಗೋಕಾಕ್ ಮತ್ತು ಯಲ್ಲಾಪುರದಲ್ಲಿ ಅಸಮಾಧಾನಗೊಂಡಿದ್ದ ಸ್ಥಳೀಯ ಬಿಜೆಪಿ ನಾಯಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

8 ನಿಗಮ – ಮಂಡಳಿ ಹಾಗೂ ಅಧ್ಯಕ್ಷರ ಪಟ್ಟಿ:

1) ಅಶೋಕ್ ಪೂಜಾರಿ : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು – ಗೋಕಾಕ್, ಬೆಳಗಾವಿ
2) ರಾಜು ಕಾಗೆ : ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮತ್ತು ಮಲಪ್ರಭಾ-ಘಟಪ್ರಭಾ ಯೋಜನೆ – ಕಾಗವಾಡ, ಬೆಳಗಾವಿ
3) ಯು.ಬಿ. ಬಣಕಾರ್ : ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಮತ್ತು ಸಂಸ್ಕರಣ ನಿಗಮ – ಹಿರೇಕೆರೂರು, ಹಾವೇರಿ ಜಿಲ್ಲೆ

4) ಬಸನಗೌಡ ತುರವಿಹಾಳ : ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ತುಂಗ ಭದ್ರ ಯೋಜನೆ) – ಮಸ್ಕಿ, ರಾಯಚೂರು
5) ವಿಎಸ್ ಪಾಟೀಲ : ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ – ಹುಬ್ಬಳ್ಳಿ
6) ಹೆಚ್.ಆರ್. ಗವಿಯಪ್ಪ : ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ, ಬೆಂಗಳೂರು
7) ನಂದೀಶ್ ರೆಡ್ಡಿ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ – ಬೆಂಗಳೂರು
8) ಶರತ್ ಬಚ್ಚೇಗೌಡ : ಕರ್ನಾಟಕ ಗೃಹ ಮಂಡಳಿ – ಬೆಂಗಳೂರು

      ಅನರ್ಹರ ವಿರುದ್ಧ ಸುಪ್ರೀಂ ತೀರ್ಪು ಪ್ರಕಟಿಸಿದರೆ ಅನರ್ಹರು ಸೂಚಿಸುವ ವ್ಯಕ್ತಿಗಳಿಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಯಿದೆ. ಉಪ-ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಿದರೆ ಬಿಜೆಪಿಯೊಳಗೆ ಬಂಡಾಯ ಏಳುವ ಸೂಚನೆ ಅದಾಗಲೇ ಸಿಕ್ಕಿರುವ ಹಿನ್ನೆಲೆಯಲ್ಲಿ ಪಕ್ಷವು ಅತೃಪ್ತರನ್ನು ಈ ರೀತಿಯಾಗಿ ಓಲೈಸುವ ಪ್ರಯತ್ನ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link