ಬೆಂಗಳೂರು:
ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ.
ಅರಣ್ಯ ಭವನದ ಗೆಸ್ಟ್ ಹೌಸ್ ನಲ್ಲಿ ಸಭೆ ನಡೆಸುವ ಮೂಲಕ ಬಿಎಸ್‍ವೈ, 17 ಅನರ್ಹ ಶಾಸಕರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಸಭೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸಭೆಯಲ್ಲಿ ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದು, ನೀವ್ಯಾರೂ ಹೆದರಬೇಡಿ ಎಂದು ಅನರ್ಹಗೊಂಡ ಶಾಸಕರಿಗೆ ಬಿಎಸ್‍ವೈ ಅಭಯ ನೀಡಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 21 ರಂದು ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಫಲಿತಾಂಶ ಅಕ್ಟೋಬರ್ 24 ಕ್ಕೆ ಪ್ರಕಟವಾಗಲಿದೆ. ಸೆಪ್ಟೆಂಬರ್ 23 ಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆ ಕೊನೆಯ ದಿನ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ