ಬೆಂಗಳೂರು:
ಇನ್ನು ಮುಂದೆ ಎಲ್ಲರೂ ಸಮಯಕ್ಕೆ ಸರಿಯಾಗಿ ತಮ್ಮ ಕಚೇರಿಯಲ್ಲಿರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಆದೇಶ ನೀಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಕಚೇರಿಗಳಿಗೆ ದಿಡೀರ್ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಕೆಲವು ಗೈರಾದ ಅಧಿಕಾರಿಗಳ ಮೇಲೆ ಸಿಟ್ಟಿಗೆದ್ದಿದ್ದಾರೆ. ಇನ್ನು ಮುಂದೆ ಎಲ್ಲರೂ ಸಮಯಕ್ಕೆ ಸರಿಯಾಗಿ ತಮ್ಮ ಕಚೇರಿಯಲ್ಲಿರಬೇಕೆಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಆದೇಶ ನೀಡಿದ್ದಾರೆ. ಸಮಯಕ್ಕೆ ಸರಿಯಾಗಿ ಬರದೇ ಇದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಕಚೇರಿಗೆ ಸಮಯಕ್ಕೆ ಸರಿಯಾಗಿ ಬಾರದೇ ಜನರನ್ನು ಸತಾಯಿಸೋದು ಕೆಲವು ಸರ್ಕಾರಿ ಅಧಿಕಾರಿಗಳಿಗೆ ಖಯಾಲಿ ಆಗಿದೆ. ಇಂತಹ ಆಲಸಿ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ