ಬೆಂಗಳೂರು :
‘ನಾ ಇರುವವರೆಗೆ ಶರತ್ ಬಚ್ಚೇಗೌಡ ಅವರಿಗೆ ಬಿಜೆಪಿ ಪಕ್ಷದೊಳಗೆ ಪ್ರವೇಶ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಂಟಿಬಿ ನಾಗರಾಜ್ ಅವರಿಗ ಮಾತು ನೀಡಿದ್ದಾರೆ ಎನ್ನಲಾಗಿದೆ.
ಹೊಸಕೋಟೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡ ಚಿಕ್ಕಬಳ್ಳಾಪುರ ಸಂಸದ ಹಿರಿಯ ಬಿಜೆಪಿ ನಾಯಕ ಬಿ.ಎನ್. ಬಚ್ಚೇಗೌಡ ಅವರ ಮಗ. ಬಚ್ಚೇಗೌಡ ಒಪ್ಪಿಗೆ ಸೂಚಿಸಿದ ನಂತರವೇ ಎಂಟಿವಿ ನಾಗರಾಜ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಲಾಗಿತ್ತು. ಆದರೂ, ಹಿರಿಯ ನಾಯಕರ ಮಾತಿಗೆ ಬೆಲೆ ಕೊಡದೆ ಶರತ್ ಬಚ್ಚೇಗೌಡ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಎಂಟಿಬಿ ಸೋಲಿಗೆ ಕಾರಣರಾಗಿದ್ದಾರೆ.
ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ಕರೆದು ಸಂಸದ ಬಚ್ಚೇಗೌಡ ಅವರ ವಿರುದ್ಧ ಕಿಡಿಕಾರಿದ್ದ ಎಂಟಿಬಿ ನಾಗರಾಜ್, ಶರತ್ ಬಚ್ಚೇಗೌಡ ಅವರನ್ನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬಾರದು ಎಂದು ಸಿಎಂ ಯಡಿಯೂರಪ್ಪ ಅವರಿಗೆ ದೀರ್ಘ ಪತ್ರ ಬರೆದು ಒತ್ತಾಯಿಸಿದ್ದರು. ಹೀಗಾಗಿ ನಾ ಇರುವವರೆಗೂ ಅವರಿಗೆ ಬಿಜೆಪಿ ಪಕ್ಷದ ಒಳಗೆ ಮತ್ತೆ ಪ್ರವೇಶವಿಲ್ಲ. ಯಾವುದೇ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಎಂಟಿಬಿ ನಾಗರಾಜ್ ಗೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ