ಎಸ್ಸಿ-ಎಸ್ಟಿ-ಅಹಿಂದ ಸಮುದಾಯಗಳ ಅಭಿವೃದ್ಧಿಗೆ ಸರಕಾರದ ಪ್ರಾಮುಖ್ಯತೆ!

ಬೆಂಗಳೂರು:

    ಎಸ್ಸಿ-ಎಸ್ಟಿ, ಅಹಿಂದ ಸಮುದಾಯ ಗಳ ಸಮಗ್ರ ಅಭಿವೃದ್ಧಿಗೆ ಸರಕಾರ ಪ್ರಾಮುಖ್ಯತೆ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

       ಭಾರತದ 73ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಮಾಣಿಕ್‌ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ,  ಎಸ್ಸಿ-ಎಸ್ಟಿ, ಅಹಿಂದ ಸಮುದಾಯ ಗಳ ಸಮಗ್ರ ಅಭಿವೃದ್ಧಿಗೆ ಸರಕಾರ ಪ್ರಾಮುಖ್ಯತೆ ನೀಡಲಿದೆ. ಸರಕಾರಿ ಶಾಲೆಗಳ ಸುಧಾರಣೆ ಹಾಗೂ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. 

      ‘ಕಾಯಕವೇ ಕೈಲಾಸ ಎಂಬ ನುಡಿಯಂತೆ ನಡೆದು ನನಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಸಮೃದ್ಧ ಕರ್ನಾಟಕ ನಿರ್ಮಿಸುವ ಕನಸು ನನ್ನದು. ಪ್ರತಿಯೊಬ್ಬ ಕನ್ನಡಿಗ ನೆಮ್ಮದಿ, ಸ್ವಾಭಿಮಾನದಿಂದ ಬದುಕುವಂತಾಗಬೇಕು’ ಎನ್ನುವುದು ನನ್ನ ಆಶಯ ಎಂದು ಹೇಳಿದರು. 

      2019 ರ ಸೆಪ್ಟೆಂಬರ್ ಗೆ ಕೈಗಾರಿಕಾ ನೀತಿ ಮುಕ್ತಾಯಗೊಳ್ಳಲಿದ್ದು ಎರಡು ಮತ್ತು ಮೂರನೇ ಹಂತದ ಕೇಂದ್ಗಳಿಗೆ ಬಂಡವಾಳ ಆಕರ್ಷಣೆ ಮಾಡುವ ವಿನೂತನ ತಂತ್ರಜ್ಞಾನ ,ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶವಿರುವಂತೆ ನೂತನ ಕೈಗೊಳ್ಳುವ ನೀತಿ ರೂಪಿಸುವ ಭರವಸೆ ನೀಡಿದರು.

      45 ವರ್ಷಗಳಲ್ಲಿ ಕಂಡರಿಯದ ಪ್ರಕೃತಿ ವಿಕೋಪ ಎದುರಾಗಿದೆ 22 ಜಿಲ್ಲೆಗಳ ವ್ಯಾಪ್ತಿಯಲ್ಲಿ 103 ತಾಲೂಕುಗಳು ಭೀಕರ ಪ್ರವಾಹಕ್ಕೆ ತುತ್ತಾಗವೆ, ಪ್ರವಾಹದಿಂದ 61 ಮಂದಿ ಈವರೆಗೂ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ 48 ಗಂಟೆಗಳ ಒಳಗಾಗಿ 5ಲಕ್ಷ ರು ಗಳಂತೆ ಪರಿಹಾರ ನೀಡಲಾಗುತ್ತಿದೆ. ಸಂತ್ರಸ್ತರಿಗೆ ತಕ್ಷಣಕ್ಕೆ 10 ಸಾವಿರ, ಮನೆ ಕಳೆದುಕೊಂಡವರಿಗೆ 5 ಲಕ್ಷ, ಮನೆ ದುರಸ್ತಿಗೆ 1 ಲಕ್ಷ ನೆರವು ಘೋಷಣೆ ಮಾಡಿದ್ದೇನೆ. ಬೆಳಗಾವಿ, ಬಾಗಲಕೋಟೆ, ಬಿಜಾಪುರ, ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು ಮತ್ತು ಗದಗ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಂತ್ರಸ್ತರ ರಕ್ಷಣೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಂಡಿದ್ದೇನೆ, ವೈಮಾನಿಕ ಸಮೀಕ್ಷೆ ಹಾಗೂ ಸ್ಥಳ ಪರೀಕ್ಷೆಗಳನ್ನು ಮಾಡಿ ಸಂತ್ರಸ್ತರಿಗೆ ತಡವಿಲ್ಲದೆ ಪರಿಹಾರ ಒದಗಿಸಲು ಪ್ರಯತ್ನಿಸಿದ್ದೇನೆ ಎಂದು ನೆರೆಹಾನಿ ಪರಿಹಾರ ಕಾರ್ಯಾಚರಣೆ ಕುರಿತು ಪ್ರಸ್ತಾಪಿಸಿದರು.

      ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಮಾಡುವುದು ನನ್ನ ಉದ್ದೇಶ. ಕ್ಯಾಲಿಫೋರ್ನಿಯ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಸಿಲಿಕಾನ್ ವ್ಯಾಲಿಗಳಂತೆ ಬೆಂಗಳೂರು ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಐಟಿ-ಬಿಟಿ ವಲಯ ರಾಜ್ಯದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡಿದ್ದು, ಈ ವಲಯಗಳ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಬೆಂಗಳೂರಿನ ಹೊರಗೂ ಈ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಆಧ್ಯತೆ ನೀಡಲಿದೆ ಎಂದರು.

      ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ನಗರ ಜಿಲ್ಲಾಧಿಕಾರಿ ಹಾಗೂ ಸರಕಾರದ ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap