ಮೈಸೂರು:
ರಾಜ್ಯ ಸರ್ಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಕಬಿನಿ ಜಲಾಶಯದ ಸಮೀಪ ಬೀಚನಹಳ್ಳಿ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಬರಮಾಡಿಕೊಳ್ಳಲಾಯಿತು.
ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಅಧ್ಯಯನ ತಂಡವೂ ಅಗಮಿಸಿ ವಾಸ್ತವ ಪರಿಶೀಲಿಸಿ ತೆರಳಲಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರದಿಂದ ಪರಿಹಾರ ದೊರೆಯುವ ನಿರೀಕ್ಷೆ ಇದೆ ಎಂದರು.
ರಾಜ್ಯ ಭೇಟಿಗೆ ಆಗಮಿಸಿದ್ದ ಪ್ರಧಾನಿಯವರಿಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ. ರಾಜ್ಯ ಸರ್ಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಚಾಲನೆ ನೀಡುವ ಕುರಿತು ಮತ್ತೆ ಪ್ರಯತ್ನ ನಡೆಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮುಖ್ಯಮಂತ್ರಿಗಳು ತಿಳಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶ್ರೀನಿವಾಸ ಪ್ರಸಾದ್, ವಸತಿ ಸಚಿವ ವಿ.ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ