ಬೆಂಗಳೂರು :
ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಡಿ.ಕೆ.ಶಿವಕುಮಾರ್ ಬಂಧನವಾಗಿರುವ ಕುರಿತು ಡಿಸಿಎಂಗಳು ಮತ್ತು ಗೃಹ ಸಚಿವರನ್ನು ಹೊರತುಪಡಿಸಿ, ಬೇರೆ ಯಾರೂ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಬಾರದು. ಒಂದು ವೇಳೆ ನೀಡಿದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ಶಾಸಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಅವರ ಬಂಧನದ ಹಿನ್ನಲೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಹಾಗೂ ಡಿಕೆಶಿ ಬೆಂಬಲಿಗರು ಅಮಿತ್ ಶಾ, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ