ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಮುಹೂರ್ತ ಫಿಕ್ಸ್!!??

ಬೆಂಗಳೂರು :

       ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜುಲೈ. 26ರ ಬೆಳಿಗ್ಗೆ 11 ಗಂಟೆಗೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

      ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ನೀಡದಿರುವ ನಿಯಮ ಬಿಜೆಪಿಯಲ್ಲಿದೆ, ಅದರಂತೆ ಯಾರಿಗೂ ಸ್ಥಾನಮಾನ ಕೊಟ್ಟಿಲ್ಲ, ಆದರೆ ನನಗೆ 78 ವರ್ಷವಾದರೂ ಬಿಜೆಪಿಯಲ್ಲಿ ನನ್ನ ಕೆಲಸವನ್ನು ಮೆಚ್ಚಿ ವರಿಷ್ಠರು ನನಗೆ ಎಲ್ಲ ಸ್ಥಾನಮಾನವನ್ನು ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ, ಜುಲೈ 25ಕ್ಕೆ ಹೈಕಮಾಂಡ್ ನಿಂದ ಸೂಚನೆ ಬರುತ್ತದೆ, ಅದರಂತೆ ನಡೆದುಕೊಳ್ಳುತ್ತೇನೆ, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

      ಜುಲೈ 26ಕ್ಕೆ ನಾನು ಮುಖ್ಯಮಂತ್ರಿಯಾಗಿ ಎರಡು ವರ್ಷಗಳಾಗುತ್ತದೆ. ಮುಂದಿನ ವರ್ಷಗಳಲ್ಲಿ ಪಕ್ಷವನ್ನು ಬಲಪಡಿಸಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಉದ್ದೇಶ ಮತ್ತು ಸಂಕಲ್ಪ, ಅದೇ ಸಂಕಲ್ಪವನ್ನು ಈಗಲೂ ಮುಂದೆಯೂ ಹೊಂದಿರುತ್ತೇನೆ. ರಾಷ್ಟ್ರೀಯ ನಾಯಕರು ಜುಲೈ 25ಕ್ಕೆ ನೀಡುವ ಸೂಚನೆ ಮೇರೆಗೆ 26ನೇ ತಾರೀಖಿನಿಂದ ನನ್ನ ಕೆಲಸವನ್ನು ಪ್ರಾರಂಭ ಮಾಡುತ್ತೇನೆ ಎಂದು ಹೇಳಿದ್ದಾರೆ.

      ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜುಲೈ 26 ರ ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ.  ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸಿಎಂ ಹುದ್ದೆಗೆ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link