ಬೆಂಗಳೂರು :
ಕಳೆದ ವಾರ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾರೆ.
ಈಗ ಮತ್ತೊಮ್ಮೆ ನಡೆಸಿರೋ ಕೊರೊನಾ ಪರೀಕ್ಷೆಯಲ್ಲಿ ಅವರಿಗೆ ಸೋಂಕು ಇಲ್ಲ ಅನ್ನೋದು ದೃಢಪಟ್ಟಿದೆ. ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೊರೋನಾವನ್ನು ಗೆದ್ದು ಬಂದಿದ್ದಾರೆ.
ಮಣಿಪಾಲ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಪುಷ್ಪಗುಚ್ಛ ನೀಡುವ ಮೂಲಕ, ಆತ್ಮೀಯವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿತು. ಆದ್ರೇ ಇನ್ನೂ ಎರಡು ದಿನಗಳ ಕಾಲ ಸಿಎಂ ಯಡಿಯೂರಪ್ಪ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ