ಬೆಂಗಳೂರು :
ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಬೆಳಗ್ಗೆ ರಾಜಭವನದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಅಕ್ಟೋಬರ್ 10 ರಂದು ಮೈಸೂರಿಗೆ ಆಗಮಿಸಿದ್ದ ಕೋವಿಂದ್ ಅವರು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿಗೆ ಬಂದಾಗ ಸಿಎಂ, ಅವರ ಸ್ವಾಗತಕ್ಕೆ ಹೋಗಿರಲಿಲ್ಲ. ಹೀಗಾಗಿ ಇಂದು ರಾಜಭವನಕ್ಕೆ ತೆರಳಿ ಮಾತುಕತೆ ನಡೆಸಿದರು.
ಈ ವೇಳೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
