ತೀವ್ರ ಹೊಟ್ಟೆನೋವು : ಸಿಎಂರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು :

     ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರಿಗೆ ಉದರ ಬೇನೆ ಕಾಣಿಸಿಕೊಂಡಿದ್ದು, ಇಂದಿನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

      ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಬೇಕಿದ್ದ ವಾಲ್ಮಿಕಿ ಜಯಂತಿಗೂ ಗೈರಾಗಿದ್ದಾರೆ.

      ಕಾರ್ಯಕ್ರಮದ ವೇದಿಕೆ ಮೇಲೆ ಹಾಕಲಾಗಿದ್ದ ಸಿಎಂ ಫೋಟೋವನ್ನು ತೆಗೆಯುವಂತೆ ವಾಲ್ಮೀಕಿ ಸಮುದಾಯದ ನಾಯಕರು ಒತ್ತಾಯಿಸಿದ್ದಾರೆ. ಸಮುದಾಯದವರ ಒತ್ತಡಕ್ಕೆ ಮಣಿದು ಆಯೋಜಕರು ಫೋಟೋವನ್ನು ತೆಗೆದಿದ್ದಾರೆ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಭಾಗಿಯಾಗಿದ್ದರು.

ರದ್ದಾದ ಕಾರ್ಯಕ್ರಮಗಳು 

      ಕುಮಾರಸ್ವಾಮಿ ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಬೇಕಿತ್ತು, ಹಾಗೂ 2.5 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡುವವರಿದ್ದರು. ಹಾಗೆಯೇ ಮಧ್ಯಾಹ್ನ 12 ಗಂಟೆಗೆ ಕೈಗಾರಿಕಾ ಉದ್ದೇಶಕ್ಕೆ ಉಪಯೋಗಿಸುವ ನೀರಿನ ದರದ ಪರಿಷ್ಕರಣೆ ಕುರಿತಂತೆ ಸಭೆ ನಿಗದಿಯಾಗಿತ್ತು.

      ಮಧ್ಯಾಹ್ನ 1 ಗಂಟೆಗೆ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್, ಕೆಜಿಎಫ್ ಕಂಪನಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ಕುರಿತು ಸಭೆ ನಡೆಯಬೇಕಿತ್ತು. ಮಧ್ಯಾಹ್ನ 3 ಗಂಟೆಗೆ ಕೆಪಿಸಿ ಬೋರ್ಡ್ ಮೀಟಿಂಗ್, 3.45ಕ್ಕೆ ಬಿಇಎಂಎಲ್ ವತಿಯಂದ ಮುಖ್ಯಮಂತ್ರಿಗಳಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಚೆಕ್ ಸಲ್ಲಿಕೆ, ಕೆಎಎಸ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳ ಭೇಟಿ ಹಾಗೆಯೇ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಇದೆಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಲಸಾಗಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap