ಸಿದ್ಧಗಂಗಾ ಶ್ರೀಗಳ ಹುಟ್ಟೂರಿಗೆ 25 ಕೋಟಿ!!!

ಬೆಂಗಳೂರು:      ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರದ 2019-20ನೇ ಸಾಲಿನ 2 ನೇ ಬಜೆಟ್ ಅನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡಿಸಿದ್ದು, ಬಜೆಟ್ ನಲ್ಲಿ ಇತ್ತೀಚೆಗೆ ಲಿಂಗೈಕ್ಯರಾದ ಡಾ. ಶಿವಕುಮಾರ ಸ್ವಾಮೀಜಿ ಮತ್ತು ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಹುಟ್ಟೂರುಗಳನ್ನು ಅಭಿವೃದ್ಧಿ ಮಾಡಲು ಮತ್ತು ಅಲ್ಲಿ ಸಾಂಸ್ಕೃತಿಕ ಕೇಂದ್ರಗಳನ್ನು ಆರಂಭಿಸಲು ಅನುದಾನ ಒದಗಿಸಿದ್ದಾರೆ. 
     ತ್ರಿವಿಧ ದಾಸೋಹಿ ಶಿವಕುಮಾರಸ್ವಾಮೀಜಿ ಅವರ ಹುಟ್ಟೂರು ಮಾಗಡಿ ತಾಲೂಕಿನ ವೀರಾಪುರದವರದಲ್ಲಿ ಜಾಗತಿಕ ಮಟ್ಟದ ಸಾಂಸ್ಕೃತಿಕ ಕೇಂದ್ರ ಆರಂಭಿಸಿ, ಗ್ರಾಮವನ್ನು ಅಭಿವೃದ್ಧಿಗೊಳಿಸಲು 25 ಕೋಟಿ ರೂ.ಗಳನ್ನು ನೀಡಿದ್ದಾರೆ. 
     ಆದಿಚುಂಚನಗಿರಿಯ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ, ಅವರ ಹುಟ್ಟೂರು  ಬಿಡದಿ ಬಳಿಯ ಬಾನಂದೂರನ್ನು ಮಾದರಿ ಗ್ರಾಮವಾಗಿಸಿ, ಅದನ್ನು ಜಾಗತಿಕ ಸಾಂಸ್ಕೃತಿಕ ಮತ್ತು ಪಾರಂಪರಿಕ ಗ್ರಾಮವನ್ನಾಗಿ ಮಾಡಲು 25 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link